ಸಮಗ್ರ ಉದ್ಯೋಗ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 223 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ವಿದ್ಯಾರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
SC/ST/PwBD/XSM/ಮಹಿಳಾ ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.300/-
ಪಾವತಿ ವಿಧಾನ: ಆನ್ಲೈನ್/ಆಫ್ಲೈನ್
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ವೇತನ:
ಮಾಸಿಕ ₹ 55,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://careers.ntpc.co.in/recruitment/login.php ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಿ.