Ad Widget .

ಕಡಬ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ| ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮದ ಭರವಸೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಗೌರವಾನ್ವಿತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಂದು(ಫೆ.5) ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಹಲವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಗಳಾದರು.

Ad Widget . Ad Widget .

ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಜಿ. ರಾಮಕುಂಜ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತ್ರತ್ವದಲ್ಲಿ ಕಡಬ ತಾಲೂಕಿನಲ್ಲಿರುವ ಅರಣ್ಯ ಇಲಾಖೆಗೆ ಸಂಬಂದಪಟ್ಟ ಕಡತಗಳು, ಅಕ್ರಮ ಸಕ್ರಮದಲ್ಲಿ ಅರ್ಜಿ ವಿಲೇವಾರಿ ಹಾಗೂ ತಾಲೂಕಿನ ಅನೇಕ ಗ್ರಾಮಗಳಲ್ಲಿ ರೈತರಿಗೆ ಸಮಸ್ಯೆಯಾಗಿರುವ ಅರಣ್ಯ ಹಾಗೂ ಕಂದಾಯ ಭೂಮಿ ಸರ್ವೇ ನಂ.175 ಹಾಗೂ ಇನ್ನಿತರ ಸರ್ವೆ ನಂ. ನಿಂದ ಕೃಷಿಕರಿಗೆ ಆಗುತ್ತಿರುವ ಸಮಸ್ಯೆಯ ಕುರಿತು ಬ್ಲಾಕ್ ಅಧ್ಯಕ್ಷರು ಸವಿಸ್ತಾರವಾಗಿ ಸಚಿವರಿಗೆ ವಿವರಿಸಿದರು.

Ad Widget . Ad Widget .

ಸ್ಪಂದನೆಗೆ ಸ್ಪಂದಿಸಿದ ಸಚಿವರು ತಕ್ಷಣವೇ ಸ್ಥಳದಲ್ಲಿದ್ದಂತಹ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಧಿಕಾರ ಬಳಿ ಸಮಸ್ಯೆಯ ಕುರಿತು ಮಾಹಿತಿ ಸಂಗ್ರಹಿಸುವಂತೆ ತಿಳಿಸಿ ನಾಳೆ ಮಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆದು ಈ ಕುರಿತಾಗಿ ಚರ್ಚಿಸಿ ಈ ಸಮಸ್ಯೆಗಳಿಗೆ ಪೂರ್ಣ ವಿರಾಮ ನೀಡಲು ಪ್ರಯತ್ನಿಸುವುದಾಗಿ ಕೃಷ್ಣಪ್ಪ ಜಿ. ಹಾಗೂ ಸುಧೀರ್ ಕುಮಾರ್ ಶೆಟ್ಟಿ ಅವರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರಕ್ಷಿತ್ ಶಿವರಾಮ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಅಶೋಕ್ ನೆಕ್ರಾಜೆ, ಸುಬ್ರಹ್ಮಣ್ಯ ಗ್ರಾಮ ಸಮಿತಿ ಕಾಂಗ್ರೆಸ್ ನ ಅಧ್ಯಕ್ಷ ಹರೀಶ್ ಇಂಜಾಡಿ, ಕಾಂಗ್ರೆಸ್ ಮುಖಂಡರುಗಳಾದ ರವಿ ರುದ್ರಪಾದ, ವಿಮಲಾ ರಂಗಯ್ಯ, ವಲಯ ಕಾಂಗ್ರೆಸ್ ಕಾರ್ಯದರ್ಶಿ ಪ್ರದೀಪ್ ಕಳಿಗೆ, ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಸದಸ್ಯರುಗಳಾದ ಪವನ್ ಸುಬ್ರಹ್ಮಣ್ಯ, ಲೋಲಾಕ್ಷ ಕೈಕಂಬ ಹಾಗೂ ಬ್ಲಾಕ್ ಹಾಗೂ ವಲಯ ಮಟ್ಟದ ಹಲವು ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *