Ad Widget .

ಫೆ.9 ಮತ್ತು 10 ರಂದು ಅಮಿಶ್ ಶಾ ರಾಜ್ಯಕ್ಕೆ ಆಗಮನ… ಲೋಕಸಭಾ ಚುನಾವಣಾ ತಯಾರಿ ಬಗ್ಗೆ ಮಾಹಿತಿ ಸಂಗ್ರಹ

ಸಮಗ್ರ ನ್ಯೂಸ್: ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು ಮತ್ತು ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಇದೆ ವೇಳೆ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಅಮಿತ್​ ಶಾ ರಾಜ್ಯ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ.

Ad Widget . Ad Widget .

ಲೋಕ ಸಭಾ ಚುನಾವಣೆಗೆ ಈಗಾಗಲೇ ತಯಾರಿಗಳು ನಡೆಯುತ್ತಿದೆ. ಅದರಲ್ಲೂ ಬಿಜೆಪಿ ನಾಯಕರು ಈಗಾಗಲೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕಾರಿಣಿ ಸಭೆಗಳನ್ನು ನಡೆಸಿದ್ದಾರೆ. ಈ ಸಭೆಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಟಿಕೆಟ್​ ನೀಡಬೇಕು ಎಂಬ ವಿಚಾರವಾಗಿ ನಾಯಕರು ಕಾರ್ಯಕರ್ತರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಫೆಬ್ರವರಿ 9 ಮತ್ತು 10 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್​ ಶಾ ಅವರ ಮುಂದೆ ವರದಿ ಒಪ್ಪಿಸಲಿದ್ದಾರೆ.

Ad Widget . Ad Widget .

ಅಮಿತ್​ ಶಾ ಸಭೆಯಲ್ಲಿ ರಾಜ್ಯ ನಾಯಕರ ನಡುವಿನ ವೈಮನಸ್ಸು ಕೂಡ ಶಮನಗೊಳ್ಳುವ ಸಾಧ್ಯತೆಯೂ ಇದೆ. ಹಾಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗು ಸಾಧ್ಯತೆ ಇದೆ.

Leave a Comment

Your email address will not be published. Required fields are marked *