ಫೆಬ್ರವರಿ 16ಕ್ಕೆ ರಾಜ್ಯ ಬಜೆಟ್/ ಫೆಬ್ರವರಿ 12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಫೆಬ್ರವರಿ 12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರು ಫೆ.12ರಂದು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆನಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

Ad Widget ... ..

ಅಧಿವೇಶನಕ್ಕೂ ಮುನ್ನ ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಫೆ.9ರಂದು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ಶಾಸಕರಿಗೆ ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಮತ್ತು ಬಜೆಟ್ ಅಧಿವೇಶನದ ವರದಿಗಾರಿಕೆ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ವಿವರಿಸಿದರು. ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಈ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ.

Ad Widget

Leave a Comment

Your email address will not be published. Required fields are marked *