ಸಮಗ್ರ ಉದ್ಯೋಗ: ಶಿವಮೊಗ್ಗ ಗ್ರಾಮ ಪಂಚಾಯತ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಲೈಬ್ರರಿ ಸೂಪರ್ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 23, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.
ಶೈಕ್ಷಣಿಕ ಅರ್ಹತೆ:
ಶಿವಮೊಗ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಶಿವಮೊಗ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 23, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ವೇತನ:
ಮಾಸಿಕ ₹ 15,196.72
ಉದ್ಯೋಗದ ಸ್ಥಳ:
ಶಿವಮೊಗ್ಗ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸಂಬಂಧಪಟ್ಟ ಗ್ರಾಮ ಪಂಚಾಯತ್ನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು
ಶಿವಮೊಗ್ಗ
ಕರ್ನಾಟಕ
ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.