Ad Widget .

5.6 ಕೋಟಿ ಸಸಿಗಳ ನಾಟಿ; ಈಶ್ವರ ಖಂಡ್ರೆ

ಸುಳ್ಯ, ಫೆ.5: ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5 ಕೋಟಿ 6 ಲಕ್ಷ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹರಿಸು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Ad Widget . Ad Widget .

ಅವರು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಸಂದರ್ಶನದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ಸಸಿ ನಾಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಗಳು ಉಂಟಾಗದಂತೆ ಅದಕ್ಕೆ ಅಡಿಟ್ ಮಾಡಲು ಸೂಚಿಸಿದ್ದೇನೆ. ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಅರಣ್ಯ ಜಮೀನು ಒತ್ತುವರಿ ಆಗಿತ್ತು ಅಂತಹ ಎರಡು ಸಾವಿರ ಎಕ್ರೆ ಜಮೀನು ಒತ್ತುವರಿ ತೆರವು ಗೊಳಿಸಿದ್ದೇವೆ. 35 ಸಾವಿರ ಎಕ್ರೆ ಅರಣ್ಯ ಮೀಸಲು ಅರಣ್ಯ ಎಂದು ಘೋಷಿಸಿದ್ದೇವೆ. ಮಾನವ ಪ್ರಾಣಿ ಸಂಘರ್ಷ ತಡೆಗೆ ಶಾಶ್ವತ ಪರಿಹಾರ ಕೈಗೊಳ್ಳುವ ಕೆಲಸ ಮಾಡುತ್ತಿದ್ದೇವೆ.

Ad Widget . Ad Widget .

ಮಾಲಿನ್ಯ ತಡೆಗೂ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ಅರಣ್ಯ ಇಲಾಖೆಯಲ್ಲಿ ಪಾರದರ್ಶಕತೆ ತಂದಿದ್ದೇವೆ. ಇಲಾಖೆಯಲ್ಲಿ ಖಾಲಿ ಇದ್ದಂತಹ ಹುದ್ದೆ ಭರ್ತಿಗೆ ವ್ಯವಸ್ಥೆ ಮಾಡಿದ್ದೇವೆ ಜೊತೆಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರ ಸಂಪತ್ತು ರಕ್ಷಣೆಗೆ ಮುಂತಾದ ಕೆಲಸಗಳು ಮುಂದುವರಿಸಲಾಗುತ್ತಿದೆ ಎಂದು ಹೇಳಿದರು‌.

Leave a Comment

Your email address will not be published. Required fields are marked *