Ad Widget .

ಜೀವಂತ ಮೀನು ನುಂಗಿದ್ದ ಹನ್ನೊಂದು ತಿಂಗಳ ಮಗು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಅವರ 11 ತಿಂಗಳ ಮಗು ಪ್ರತೀಕ್‌ ಜೀವಂತ ಮೀನು ನುಂಗಿ ಗಂಟಲಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.

Ad Widget . Ad Widget .

ಆಟವಾಡುತ್ತಾ ಮಗು ಕೈಯಲ್ಲಿದ್ದ ಮೀನು ನುಂಗಿದ್ದು, ಗಂಟಲಲ್ಲಿ ಸಿಕ್ಕಿಕೊಂಡಿತ್ತು. ತಕ್ಷಣ ಮೀನನ್ನು ಹೊರ ತೆಗೆಯಲು ಪೋಷಕರು ಪ್ರಯತ್ನ ನಡೆಸಿದ್ದರಾದರೂ ಯಶಸ್ವಿ ಆಗಿರಲಿಲ್ಲ. ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಬಳಿಕ ಪೋಷಕರು ಮಗುವನ್ನು ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಕೂಡಲೇ ತಪಾಸಣೆ ನಡೆಸಿದ ತಜ್ಞ ವೈದ್ಯರು, ತೀವ್ರ ನಿಗಾ ಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ ಮೀನನ್ನು ಹೊರ ತೆಗೆದು ಮಗುವಿನ ಜೀವವನ್ನು ಉಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *