Ad Widget .

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಪ್ರತಿಭಟನೆ ಸಂಧರ್ಭದಲ್ಲಿ ರಸ್ತೆ ತಡೆದು ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ​​ಹೈಕೋರ್ಟ್ ವಜಾ ಮಾಡಿದ್ದು, 10 ಸಾವಿರ ರೂ. ದಂಡ ವಿಧಿಸಿದೆ. ಹಾಗೆ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.

Ad Widget . Ad Widget .

ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್​ ಸೇರಿದಂತೆ ಕಾಂಗ್ರೆಸ್​ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆ ತಡೆ ಉಂಟಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನಸಾಮಾನ್ಯರ ಸಂಚಾರಕ್ಕೆ ತೊಂದರೆಯುಂಟಾಗಿತ್ತು. ಹೀಗಾಗಿ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.

Ad Widget . Ad Widget .

ಅದರಂತೆ ಮಾರ್ಚ್ 7 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ​ ರಣದೀಪ್ ಸುರ್ಜೇವಾಲಾ, ಮಾರ್ಚ್ 11 ರಂದು ಸಚಿವ ಎಂ.ಬಿ.ಪಾಟೀಲ್, ಮಾರ್ಚ್ 15 ರಂದು ಸಚಿವ ರಾಮಲಿಂಗಾರೆಡ್ಡಿ ಅವರು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *