Ad Widget .

ಮದುವೆಯಾಗಿ 21 ದಿನಕ್ಕೆ ಬಿಟ್ಟುಹೋದ ಪತ್ನಿ| ಮನನೊಂದು ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮದುವೆಯಾಗಿ 21 ದಿನಕ್ಕೆ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

Ad Widget . Ad Widget .

ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದು ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

Ad Widget . Ad Widget .

ಚಿಕ್ಕಮಗಳೂರಿನ ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಒಪ್ಪಿಗೆ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು. ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Comment

Your email address will not be published. Required fields are marked *