Ad Widget .

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಇಂದು ಮೋದಿ ನೇತೃತ್ವದಲ್ಲಿ ಸಭೆ

ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಹಾಲಿ ಆಯುಕ್ತರಾಗಿರುವ ಅನೂಪ್ ಚಂದ್ರ ಪಾಂಡೆ ಅವರು ಫೆ.15ರಂದು ನಿವೃತ್ತರಾಗಲಿದ್ದು, ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬುಧವಾರದ ಸಭೆ ಮಹತ್ವ ಪಡೆದುಕೊಂಡಿದ್ದು, ಈ ಸಭೆಯು ಮುಖ್ಯ ಚುನಾವಣಾ ಅಧಿಕಾರಿ 2023 ಮತ್ತು ಇತರ ಸದಸ್ಯರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಛೇರಿಯ ಅವಧಿ) ಕಾಯಿದೆಯ ಆಧಾರದ ಮೇಲೆ ನಡೆಯಲಿದೆ.

Ad Widget . Ad Widget .

ಪ್ರಧಾನಿ ನರೇಂದ್ರ ಮೋದಿ ಅವರ “ಅಧಿಕೃತ ನಿವಾಸದಲ್ಲಿ ಬುಧವಾರ ಸಂಜೆ 7:30ರಿಂದ ಈ ಮಾತುಕತೆ ನಡೆಯಲಿದೆ. ಕಾನೂನು ಸಚಿವ ‘ಅರ್ಜುನ್ ರಾಮ್ ಮೇಘ್ರಾಲ್ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Ad Widget . Ad Widget .

ಜನವರಿ 2ರಂದು ನೂತನ ಕಾಯ್ದೆ ಜಾರಿಗೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ, ವಿರೋಧ ಪಕ್ಷದ ನಾಯಕರು ಅಥವಾ ಲೋಕಸಭೆಯಲ್ಲಿ ಪ್ರಮುಖ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಹೊಸ ಚುನಾವಣಾ ಆಯುಕ್ತರನ್ನು ನೇಮಿಸಲಿದ್ದಾರೆ.

Leave a Comment

Your email address will not be published. Required fields are marked *