Ad Widget .

ಮುಖ್ಯಮಂತ್ರಿ ಕಚೇರಿಗೆ ಬಿಜೆಪಿ ನಾಯಕರ ಮುತ್ತಿಗೆ

ಸಮಗ್ರ ನ್ಯೂಸ್: ಒಂದು ಕಡೆ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ ಇಂದು ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು

Ad Widget . Ad Widget .

ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು ರಾಜ್ಯ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದರು.

Ad Widget . Ad Widget .

ವಿಪಕ್ಷ ನಾಯಕ ಅಶೋಕ್ ಮಾತನಾಡಿ ರಾಜ್ಯದ ರೈತರು ಸಂಕಷ್ಟದಲ್ಲಿ ಇದ್ದರೆ ಇವರು ಮಜಾ ಮಾಡಲು ದೆಹಲಿ ಹೋಗಿದ್ದಾರೆ. ಇದರಿಂದ ವಿಧಾನಸೌಧ ಖಾಲಿಖಾಲಿಯಾಗಿದೆ. ಬರಗಾಲದಿಂದ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಬೆಂಗಳೂರಿಗೂ ಕುಡಿಯುವ ನೀರು ಕಡಿಮೆ ಪೂರೈಕೆಯಾಗುತ್ತಿದೆ. ಗ್ಯಾರಂಟಿ ಘೋಷಣೆ ಮಾಡಿ ಆಗೊಂದು ಈಗೊಂದು ಷರತ್ತುಹಾಕಿ ಜನರಿಗೆ ನಾಮ ಹಾಕುತ್ತಿದ್ದಾರೆ. ಮುಲ್ಲಾಗಳಿಗೆ 10 ಸಾವಿರ ಕೋಟಿ ಕೊಡಲು ಹಣ ಇದೆ ರೈತರಿಗೆ ಕೊಡಲು ಇವರಿಗೆ ಹಣವಿಲ್ಲ, ರೈತರಿಗೆ ಆತ್ಮಹತ್ಯೆ ಭಾಗ್ಯ ಕೊಟ್ಟಿದ್ದಾರೆ. ವಿದ್ಯುತ್ ಸಮಸ್ಯೆಗಳ ಬಗ್ಗೆಯು ಪ್ರಸ್ತಾಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಬಿಜೆಪಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

Leave a Comment

Your email address will not be published. Required fields are marked *