ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ|ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

. Ad Widget . Ad Widget . Ad Widget .

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ COTPA 2003, 2015 ಕಾಯ್ದೆ ಅನ್ವಯ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಹುಕ್ಕಾ ಬಾರ್‌ಗಳು ಜನರ ಮೇಲೆ ವಿಶೇಷವಾಗಿ
ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರು ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿ ಸಮುದಾಯದವರು ತಂಬಾಕು ಸಹಿತ ಅಥವಾ ಮೊಲಾಸಸ್​ ಇತರೆ ಹೆಸರಿನಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸೇವನೆ ಮಾಡಿ ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರೋದು ಸರ್ಕಾರದ ಗಮನಕ್ಕೆ ಬಂದಿದೆ. 13 ವರ್ಷದಿಂದ 28-29 ರವರೆಗಿನ ಯುವಕರು ತಂಬಾಕು ಬಳಸುವ ಹುಕ್ಕಾಗೆ ಬಲಿಯಾಗುತ್ತಿದ್ದಾರೆ. ಈಗಿರುವ COPTA ಕ್ಕೆ ನಾವು ಕೆಲವು ತಿದ್ದುಪಡಿಗಳನ್ನು ಮಾಡಿದ್ದೇವೆ ಮತ್ತು ಸಾರ್ವಜನಿಕವಾಗಿ ಸಿಗರೇಟ್ ಮಾತ್ರವಲ್ಲದೆ ಇತರ ಎಲ್ಲಾ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಿದ್ದೇವೆ. ದಂಡದ ಮೊತ್ತ ಹೆಚ್ಚಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದರು.

Leave a Comment

Your email address will not be published. Required fields are marked *