Ad Widget .

ಸುಳ್ಯ: ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಫೆ.7) ಬೆಳಿಗ್ಗೆ ಸಂಭವಿಸಿದೆ.

Ad Widget . Ad Widget .

ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಪುತ್ತೂರು ತಾಲೂಕಿನ ತಿಂಗಳಾಡಿಯ ವಸಂತ ಎಂಬವರು ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .

ಕೂಲಿಕಾರರಾಗಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗಿದ್ದರು. ಇದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿತ್ತು‌ ಎಂದು ತಿಳಿದುಬಂದಿದೆ. ಮೃತರು ಪತ್ನಿ ಗೀತಾ, ಪುತ್ರ ನಾಗೇಶ್, ಪುತ್ರಿಯರಾದ ನಳಿನಿ ಹಾಗೂ ನಯನರವರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.

Leave a Comment

Your email address will not be published. Required fields are marked *