Ad Widget .

ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ/ ಫೆ.7 ರಿಂದ 9 ರವರೆಗೆ ಹೈ ಅಲರ್ಟ್

ಸಮಗ್ರ ನ್ಯೂಸ್: ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, 4,807 ಪುರುಷರು, 312 ಹಿಳೆಯರು ಮತ್ತು ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 5,121 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಜನರು ಮತದಾನ ಕೇಂದ್ರಗಳಿಗೆ ಬಾರದಂತೆ ಮತ್ತು ಅಭ್ಯರ್ಥಿಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಬರೋಬ್ಬರಿ 6.50 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಫೆ.7 ರಿಂದ 9 ರವರೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Ad Widget . Ad Widget .

ಒಟ್ಟಾರೆ 100 ಕ್ಕೂ ಹೆಚ್ಚು ವಿದೇಶಿ ವೀಕ್ಷಕರು ಪಾಕಿಸ್ತಾನದ ಚುನಾವಣೆ ಮೇಲೆ ಕಣ್ಣಿಟ್ಟಿದ್ದು, ಈ ಬಾರಿ ಯಾವ ಪಕ್ಷಕ್ಕೆ ಗೆಲುವು ಎನ್ನುವ ಕುತೂಹಲ ಎಲ್ಲೆಡೆ ಹೆಚ್ಚಾಗಿದೆ.
ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ ಪಕ್ಷ ಈ ಬಾರಿ ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ. ಇಮ್ರಾನ್ ಖಾನ್ ಜೈಲು ಸೇರಿದ್ದು ಹಾಗೂ ಚುನಾವಣಾ ಚಿಹ್ನೆ ವಿವಾದದಿಂದಾಗಿ ಷರೀಫ್‍ಗೆ ಲಾಭ ಹೆಚ್ಚಾಗಿದೆ. ಈ ಬಾರಿ ಷರೀಫ್ ಗೆಲುವು ಸಾಧಿಸಿದರೆ ನಾಲ್ಕನೇ ಬಾರಿ ಪ್ರಧಾನಿಯಾಗಲಿದ್ದಾರೆ.

Ad Widget . Ad Widget .

ಬೆಳಿಗ್ಗೆ 8 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಚುನಾವಣೆ ಇರುವ ಕಾರಣ ದೇಶದಾದ್ಯಂತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಪಾಕಿಸ್ತಾನ ಚುನಾವಣಾ ಆಯೋಗದ ಪ್ರಕಾರ, ಧವಾರ ನೈಋತ್ಯ ಪಾಕಿಸ್ತಾನದಲ್ಲಿ ಅಭ್ಯರ್ಥಿಗಳ ಕಚೇರಿಯ ಹೊರಗೆ ಅವಳಿ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 28 ಜನರು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *