ಸಿಲಿಕಾನ್ ಸಿಟಿಯಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿಯಾಗಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ 62 ವರ್ಷದ ಆಶಾರಾಣಿ ಎಂಬುವವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾರೆ. ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

. Ad Widget . Ad Widget

ಆಶಾರಾಣಿ ಅವರು ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ‌ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಪತ್ತೆಯಾಗಿಲ್ಲ. ಅಪಘಾತ ಬಳಿಕ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತ ಪಟ್ಟಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *