Ad Widget .

ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಸಮಗ್ರ ನ್ಯೂಸ್: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ ಎಫ್​ಐಆರ್ ದಾಖಲಾಗಿದೆ. ಭಾಷಣ ಮಾಡುವಾಗ ಕೆ.ಎಸ್​ ಈಶ್ವರಪ್ಪ “ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದರು. ನಾವು ಹೀಗೆ ಬಿಡಲ್ಲ. ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ ಎಂದಿದ್ದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ವಿಚಾರಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ಆರ್‌ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು. ಕೆಎಸ್​ ಈಶ್ವರಪ್ಪ ಅವರ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ದಾವಣಗೆರೆ ಪೊಲೀಸರು ಕೆ.ಎಸ್​ ಈಶ್ವರಪ್ಪ ಅವರಿಗೆ ನೋಟಿಸ್​ ಜಾರಿ ಮಾಡಿದ್ದಾರೆ. ಅಲ್ಲದೆ ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿರುವ ಕೆಎಸ್​ ಈಶ್ವರಪ್ಪ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Ad Widget . Ad Widget . Ad Widget .

ಇನ್ನು ಬೆಂಗಳೂರಿನ ಚಕ್ರವರ್ತಿ ಬಡಾವಣೆಯಲ್ಲಿರುವ ಕೆ.ಎಸ್​.ಈಶ್ವರಪ್ಪ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು. ಇದೀಗ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

Leave a Comment

Your email address will not be published. Required fields are marked *