Ad Widget .

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ| ಸ್ಪಷ್ಟ ಹೇಳಿಕೆ ನೀಡಿದ ನಿಖಿಲ್

ಸಮಗ್ರ ನ್ಯೂಸ್: ಇತ್ತೀಚೆಗೆ ಮಂಡ್ಯ ಅಖಾಡದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತು ಆದರೆ ಈಗ ನಿಖಿಲ್ ಸ್ವತಃ ಉತ್ತರ ನೀಡಿದ್ದಾರೆ ಯಾವುದೇ ಒತ್ತಡ ಬಂದರೂ ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲ್ಲ ಎಂದು ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಾರಿ ನಿಖಿಲ್, ಮಂಡ್ಯ ಲೋಕಸಭೆಗೆ ಸ್ಪರ್ಧಿಸುತ್ತಾರೆ ಎನ್ನವ ಮಾತುಗಳಿಗೆ ಕ್ಲ್ಯಾರಿಟಿ ಸಿಕ್ಕಂತಾಗಿದೆ.

Ad Widget . Ad Widget .

ಲೋಕಸಭಾ ಚುನಾವಣೆಯಲ್ಲಿ ನಾನು ಹಾಗೂ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ, ಮುಖಂಡರ ಒತ್ತಡ ಇದೆ. ಆದರೆ ನನ್ನ ಮಾತು ಎಲ್ಲಾ ಸಮಯದಲ್ಲೂ ಒಂದೇ, ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ. ಯಾವುದೇ ಒತ್ತಡ ಬಂದರೂ ನಾನು ಲೋಕಸಭಾ ಚುನಾವಣೆಗೆ ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದರು. ಎನ್​ಡಿಎ ಮೈತ್ರಿಕೂಟದಲ್ಲಿ ಯಾವ ರೀತಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ಆಗಿದೆ. ನನ್ನ ಪ್ರವಾಸ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ಕೋಲಾರ, ಹಾಸನ, ಮೈಸೂರು ಸೇರಿದಂತೆ ಎಲ್ಲಾ ಕಡೆ ಪ್ರವಾಸ ಮಾಡುತ್ತೇನೆ. ನಾನು ಈ ಹಿಂದೆ ಮಂಡ್ಯ ಅಭ್ಯರ್ಥಿ ಆಗಿದ್ದ ಕಾರಣ ಮಂಡ್ಯದಲ್ಲಿ ಹೆಚ್ಚೆಚ್ಚು ಓಡಾಡಲು ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಕ್ಷೇತ್ರಗಳಿಗೂ ಭೇಟಿ ನೀಡುತ್ತೇನೆ ಎಂದು ಹೇಳಿದರು.

Ad Widget . Ad Widget .

Leave a Comment

Your email address will not be published. Required fields are marked *