ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್ ಲೆಕ್ಚರರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 14 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ತಮ್ಮ ರೆಸ್ಯೂಮ್ ಕಳುಹಿಸಿ. ಸುರತ್ಕಲ್ನಲ್ಲಿ ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನ್ಸ್ಟ್ರಕ್ಷನ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ, ಕನ್ಸ್ಟ್ರಕ್ಷನ್ ಮ್ಯಾನೇಜ್ಮೆಂಟ್ನಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 40,000- 50,000
ಉದ್ಯೋಗದ ಸ್ಥಳ:
ಸುರತ್ಕಲ್
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.
ಸಂದರ್ಶನ ನಡೆಯುವ ಸ್ಥಳ:
ಸಿವಿಲ್ ಇಂಜಿನಿಯರಿಂಗ್ ವಿಭಾಗ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಸುರತ್ಕಲ್
ಮಂಗಳೂರು-575025