Ad Widget .

ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು?

ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದಿದ್ದಾರೆ. ಅವರು ಏನಾದರೂ ಹಾಕಿಕೊಂಡು ಬರಲಿ. ಕೇಸರಿ ಅವರ ಮನೆ ಆಸ್ತಿಯೇ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ.
ಮಾಡಿಕೊಳ್ಳಲಿ. ಅವರು ಕೇಸರಿಯಾದರೂ ಧರಿಸಲಿ, ಕಪ್ಪಾದರೂ ಧರಿಸಲಿ. ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಯನ್ನು ಪರಿಚಯಿಸಿದೆ. ಬಸವಣ್ಮನವರ ನುಡಿದಂತೆ ನಡೆಯಬೇಕು ಎನ್ನುವ ತತ್ವದಂತೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Ad Widget . Ad Widget . Ad Widget .

ನಾವು ಆರಂಭಿಸಿದ ಗ್ಯಾರಂಟಿಗಳನ್ನು ನೋಡಿ ಪ್ರಧಾನಿಗಳು ಈಗ ಅದನ್ನೇ ಪ್ರಚಾರಕ್ಕೆ ಬಳಸುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಯಾವುದೇ ಸರ್ಕಾರಗಳು ಮಾಡಲಾಗದ್ದನ್ನು ನಾವು ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಜಾರಿ ಮಾಡಿದ್ದೇವೆ. ಇದನ್ನು ವಿರೋಧ ಪಕ್ಷದವರಿಗೆ ಸಹಿಸಲಾಗುತ್ತಿಲ್ಲ ಎಂದು ಹೇಳಿದರು.

Leave a Comment

Your email address will not be published. Required fields are marked *