Ad Widget .

ಹೆಚ್ಎಸ್ಆರ್ ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ.

Ad Widget . Ad Widget .

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು.

Ad Widget . Ad Widget .

ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

Leave a Comment

Your email address will not be published. Required fields are marked *