ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಬ್ರೇಕ್ ಹಾಕಿದೆ. ಮತದಾನ ದಿನ, ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ಹೊರಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದು, 48 ಗಂಟೆ ಮುನ್ನ ಮದ್ಯ ಮಾರಾಟ ನಿರ್ಬಂಧ ಮುಂದುವರಿಯಲಿದೆ ಎಂದು ಆದೇಶಿಸಿದೆ
ಮತದಾನ ಮುಕ್ತಾಯದ 48 ಗಂಟೆ ಮುನ್ನ ಮದ್ಯ ಮಾರಾಟ ನಿರ್ಬಂಧಿಸಬಹುದು ಎಂದು ಸರ್ಕಾರದ ಹಕ್ಕು ಪ್ರತಿಪಾದಿಸಿ ಎಎಜಿ ಪ್ರತಿಮಾ ಹೊನ್ನಾಪುರ ವಾದ ಮಂಡಿಸಿದರು. ಆಹಾರ ಪೂರೈಕೆ ಹೊರತುಪಡಿಸಿ ಮದ್ಯ ಮಾರಾಟ ಮಾಡುವಂತಿಲ್ಲ. 48 ಗಂಟೆಗಳ ಮುನ್ನ ಮದ್ಯ ಮಾರಾಟ ನಿರ್ಬಂಧ ಪಾಲಿಸಬೇಕು ಎಂದು ವಿಭಾಗೀಯ ಪೀಠ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ವಿಭಾಸಭಾ ಚುನಾವಣೆ ಫೆಬ್ರವರಿ 16 ರಂದು ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೂ ಒಂದು ದಿನ ಮುನ್ನ ಸೇರಿ ಒಟ್ಟು 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧಿಸಿರುವುದಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಹೋಟೆಲ್ಗಳ ಸಂಘಟನೆ ಹೈಕೋರ್ಟ್ ಮೆಟ್ಟಿಲೇರಿತ್ತು. 48 ಗಂಟೆಗಳ ಅವಧಿಗೆ ಮದ್ಯ ಮಾರಾಟ ನಿಷೇಧ ಅನಗತ್ಯವೆಂದು ವಾದ ಮಂಡಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಹೈಕೋರ್ಟ್ ಪೀಠ, ಮತದಾನ, ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಆಹಾರ ಪೂರೈಸಲು ರೆಸ್ಟೋರೆಂಟ್‌ಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಪೀಠ ಆದೇಶದಲ್ಲಿ ಹೇಳಿತ್ತು.