ಸಮಗ್ರ ನ್ಯೂಸ್: ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ.
ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಸೇರಿದಂತೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.