ಸಮಗ್ರ ಉದ್ಯೋಗ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೆಡಿಕಲ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಬಿಎಎಂಎಸ್, ಬಿಎಚ್ಎಂಎಸ್, ಸ್ನಾತಕೋತ್ತರ ಪದವಿ, ಜನರಲ್ ಮೆಡಿಸಿನ್ನಲ್ಲಿ ಎಂಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಉದ್ಯೋಗದ ಸ್ಥಳ:
ಧಾರವಾಡ
ವೇತನ:
ಮಾಸಿಕ ₹ 50,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://docs.google.com/forms/d/e/1FAIpQLScK4iJqGlhEYYOCJ4XkyHheIvoqSztz4PJ5eIkirMP6cfgNXQ/viewform apply here