Ad Widget .

ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ/ ಈ ಬಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್

ಸಮಗ್ರ ನ್ಯೂಸ್: ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಐಪಿಎಲ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದೀಗ ಐಪಿಎಲ್ ಕುರಿತ ಶುಭಸುದ್ದಿಯೊಂದು ಹೊರಬಿದ್ದಿದೆ. ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಐಪಿಎಲ್ ವಿದೇಶದಲ್ಲಿ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಆದರೆ ಇದೀಗ, ಈ ಬಾರಿ ಐಪಿಎಲ್ ಪಂದ್ಯಗಳು ನಮ್ಮ ಭಾರತದಲ್ಲೇ ನಡೆಯಲಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಸ್ಪಷ್ಟಪಡಿಸಿದ್ದಾರೆ.

Ad Widget . Ad Widget .

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರದ ಜೊತೆ ಈ ಕುರಿತು ಮಾತುಕತೆ ನಡೆಸಿದ್ದೇವೆ. ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಳ್ಳಲು ಕಾಯುತ್ತಿದೇವೆ. ಆ ಬಳಿಕ ಐಪಿಎಲ್ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ ಎಂದು ಹೇಳಿದ್ದಾರೆ. ಮಾರ್ಚ್ ಅಂತ್ಯದ ವೇಳೆಗೆ ಟೂರ್ನಿ ಶುರುವಾಗುವ ಸಾಧ್ಯತೆ ಇದ್ದು, ಎಲ್ಲಾ ಪಂದ್ಯಗಳು ಭಾರತದಲ್ಲಿ ನಡೆಯುವಂತೆ ನೋಡಿಕೊಳ್ಳುತ್ತೇವೆ ಎಂದು ಐಪಿಎಲ್ ಮುಖ್ಯಸ್ಥರು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *