Ad Widget .

ಕರಿಮಣಿ ಮಾಲೀಕ ನೀನಲ್ಲ ಎಂದಿದ್ದಕ್ಕೆ ಪತಿ ಸೂಸೈಡ್..!

ಸಮಗ್ರ ನ್ಯೂಸ್:ಇತ್ತೀಚೆಗೆ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ಎಲ್ಲರೂ ಈ ಹಾಡಿಗೆ ರೀಲ್ಸ್ ಮಾಡೋದು ಕಾಮನ್ ಅದರಂತೆ ಮಹಿಳೆಯೋಬ್ಬಳು ಇದೇ ಹಾಡಿಗೆ ರೀಲ್ಸ್​ ಮಾಡಿದ್ದಾಳೆ ಇದರಿಂದ ಮನನೊಂದ ಪತಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಸಾಂಗ್‌ಗೆ ರೀಲ್ಸ್‌ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಳು. ಈ ರೀಲ್ಸ್‌ ವಿಚಾರಕ್ಕೆ ಊರಲ್ಲಿ ಕುಮಾರ್‌ನನ್ನು ಕೆಲವರು ಕಾಲೆಳೆದು ಯಾರಪ್ಪಾ ಕರಿಮಣಿ ಮಾಲೀಕ ಎಂದು ಹೀಯಾಳಿಸಿದ್ದರಿಂದ ಮನನೊಂದು ಕುಮಾರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ.

Ad Widget . Ad Widget .

ಪತ್ನಿಯ ಈ ರೀಲ್ಸ್ ನೋಡಿ ಕುಮಾರ್​ನನ್ನು ಗೆಳೆಯರು ರೇಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಕುಮಾರ್, ರೀಲ್ಸ್​ ಮಾಡಿರುವುದನ್ನು ಪ್ರಶ್ನಿಸಿ ರೂಪ ಜೊತೆ ಗಲಾಟೆ ಮಾಡಿದ್ದಾರೆ.​ ಆದರೆ ಪತಿ ಮನವಿಯನ್ನು ಪತ್ನಿ ರೂಪಾ ನಿರಾಕರಿಸಿದಳು. ಇದರಿಂದ ಮನನೊಂದ ರೂಪಳ ಪತಿ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Comment

Your email address will not be published. Required fields are marked *