Ad Widget .

ಇಂದು 15ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಇಂದು (ಫೆ.16) 15ನೇ ಬಜೆಟ್ ಮಂಡಿಸಲಿದ್ದು. ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಮೇಲೆ ತುಂಬಾ ನಿರೀಕ್ಷೆಗಳಿವೆ. ಜನರ ಚಿತ್ತ ಬಜೆಟ್ ಮೇಲೆಯೆ ಇದೆ.

Ad Widget . Ad Widget .

ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ, ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಅದರಲ್ಲು ಪಂಚ ಗ್ಯಾರಂಟಿ ಹೊರೆ ಹಾಗೂ ಬರದ ಬರೆ ಸರ್ಕಾರಕ್ಕೆ ಸವಾಲಾಗಿದೆ. ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ.

Ad Widget . Ad Widget .

ಇಂದಿನ ಬಜೆಟ್​ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡುವ ನಿರೀಕ್ಷೆಯೂ ಇದೆ. ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿ ಕೊಡಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಜನರು ಅದರಲ್ಲೂ ರೈತರು ತಮಗೇನು ಘೋಷಣೆಯಾಗಲಿದೆ ಎಂದು ಕಾಯುತ್ತಿದ್ದಾರೆ.

Leave a Comment

Your email address will not be published. Required fields are marked *