Ad Widget .

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ.

Ad Widget . Ad Widget .

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Ad Widget . Ad Widget .

ಈ ಹಿಂದೆ ಹರೀಶ್ ಪೂಂಜ ಅವರು ಫೇಸ್‍ಬುಕ್‍ನಲ್ಲಿ’ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು. ಈ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಸಲ್ಲಿಕೆಯಾಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ’ ಎಂದು ಪೋಸ್ಟ್ ಹಾಕಿದ್ದರು. ಇದು ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿತ್ತು.

ಹೇಳಿಕೆ ಬಗ್ಗೆ ಸಮರ್ಥನೆ: ತಮ್ಮ ಪೋಸ್ಟ್ ವಿವಾದವಾಗುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಶಾಸಕರು, ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಹೇಳಿಕೆಗೆ ಸಾಮಾನ್ಯ ರೀತಿ ಖಂಡಿಸಿದ್ರೆ ಅವರಿಗೆ ಅರ್ಥ ಆಗಲ್ಲ. ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದೇನೆ. ಹಿಂದೂಗಳ ತೆರಿಗೆಯನ್ನು ಹಿಂದೂಗಳ ಅಭಿವೃದ್ಧಿಗೆ ನೀಡಿ ಎಂದು ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

Leave a Comment

Your email address will not be published. Required fields are marked *