ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ Industrial Development Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಬ್ಯಾಂಕಿನ ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 7, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ 1 ಹುದ್ದೆ ಖಾಲಿ ಇದೆ.
ವಿದ್ಯಾರ್ಹತೆ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂ.ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 7, 2024ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಸೇರಿ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ಗಂಟೆಗೆ 1000 ರೂ. ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಜನರಲ್ ಮ್ಯಾನೇಜರ್
HR
IDBI ಬ್ಯಾಂಕ್
IDBI ಟವರ್
WTC ಕಾಂಪ್ಲೆಕ್ಸ್
ಕಫ್ ಪರೇಡ್
ಕೊಲಾಬಾ
ಮುಂಬೈ
ಮಹಾರಾಷ್ಟ್ರ – 400005