ಸಮಗ್ರ ಉದ್ಯೋಗ: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 94 ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
ಹುದ್ದೆಯ ಮಾಹಿತಿ:
ಜೂನಿಯರ್ ಅಸಿಸ್ಟೆಂಟ್ -70
ಡ್ರೈವರ್- 2
ಅಟೆಂಡರ್- 21
ಇನ್ಫರ್ಮೇಶನ್ ಟೆಕ್ನಾಲಜಿ ಚೀಫ್ ಮ್ಯಾನೇಜರ್- 1
ವಿದ್ಯಾರ್ಹತೆ:
ಜೂನಿಯರ್ ಅಸಿಸ್ಟೆಂಟ್ -ಪಿಯುಸಿ
ಡ್ರೈವರ್- 10ನೇ ತರಗತಿ
ಅಟೆಂಡರ್- 10ನೇ ತರಗತಿ
ಇನ್ಫರ್ಮೇಶನ್ ಟೆಕ್ನಾಲಜಿ ಚೀಫ್ ಮ್ಯಾನೇಜರ್- ಕಂಪ್ಯೂಟರ್ ಸೈನ್ಸ್ನಲ್ಲಿ ಎಂ.ಟೆಕ್
ವಯೋಮಿತಿ:
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 16, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳು- 750 ರೂ.
ಸಾಮಾನ್ಯ/ ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು- 1500 ರೂ.
ಪಾವತಿಸುವ ವಿಧಾನ- ಆನ್ಲೈನ್
ವೇತನ:
ಜೂನಿಯರ್ ಅಸಿಸ್ಟೆಂಟ್ – ಮಾಸಿಕ ₹ 30,350-58,250
ಡ್ರೈವರ್- ಮಾಸಿಕ ₹ 27,650-52,650
ಅಟೆಂಡರ್- ಮಾಸಿಕ ₹ 23,500-47,650
ಇನ್ಫರ್ಮೇಶನ್ ಟೆಕ್ನಾಲಜಿ ಚೀಫ್ ಮ್ಯಾನೇಜರ್- ಮಾಸಿಕ ₹ 43,100-83,900
ಉದ್ಯೋಗದ ಸ್ಥಳ:
ಮಂಡ್ಯ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ಗಳನ್ನು ಈ ಕೆಳಗೆ ನೀಡಲಾಗಿದೆ.
https://virtualofficeerp.com/mdccb2024n2/instruction apply here
ಬ್ಯಾಂಕ್ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.