Ad Widget .

‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’

ಸಮಗ್ರ ನ್ಯೂಸ್: 2024 -25 ನೇ ಸಾಲಿನ ಬಜೆಟ್ ಮಂಡನೆ ವೇಲೆ ಬಿಜೆಪಿ ನಾಯಕರು ಕೆಲ ಪೋಸ್ಟರ್ ಗಳನ್ನು ಸದನದಲ್ಲಿ ಪ್ರದರ್ಶನ ಮಾಡಿದ್ದಾರೆ.

Ad Widget . Ad Widget .

ಬಜೆಟ್ ಮಂಡನೆ ವೇಳೆ ಸದನದಲ್ಲಿ ಪ್ಲಕಾರ್ಡ್ ಪ್ರದರ್ಶನಕ್ಕೆ ಬಿಜೆಪಿ ಮುಂದಾಗಿದೆ. ಆದರೆ, ಪ್ಲಕಾರ್ಡ್​​ಗಳನ್ನು ಒಳಗೆ ತೆಗೆದುಕೊಂಡು ಹೋಗಲು ಮಾರ್ಷಲ್​ಗಳು ಬಿಡಲಿಲ್ಲ. ಹೀಗಾಗಿ ಪೋಸ್ಟರ್ ಪ್ರದರ್ಶನಕ್ಕೆ ವಿಪಕ್ಷ ಬಿಜೆಪಿ ಸಿದ್ಧತೆ ಮಾಡಿತ್ತು.

Ad Widget . Ad Widget .

ಬಿಜೆಪಿ ಶಾಸಕರು ಪೋಸ್ಟರ್ ಗಳನ್ನು ತೆಗೆದುಕೊಂಡು ಬಂದಿದ್ದು ಅದರಲ್ಲಿ ‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ ಎಂದು ಬರೆಯಲ್ಪಟ್ಟಿರುವ ಪೋಸ್ಟರ್​​ಗಳನ್ನು ಬಿಜೆಪಿ ಶಾಸಕರು ತಂದಿದ್ದಾರೆ.

ಬಜೆಟ್​ ಅನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದರು. ಈ ವೇಳೆ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗಿದ್ದು, ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ. ಇದಾದ ಕೆಲವೇ ಹೊತ್ತಿನಲ್ಲಿ ಬಿಜೆಪಿ ನಾಯಕರು ಬಜೆಟ್​ಗೆ ಬಹಿಷ್ಕಾರ ಹಾಕಿ ಹೊರನಡೆದರು.

ಧಿಕ್ಕಾರ ಕೂಗುತ್ತಾ ಸದನದಿಂದ ಹೊರಬಂದ ಬಿಜೆಪಿ ಶಾಸಕರು, ‘ಏನಿಲ್ಲಾ ಏನಿಲ್ಲಾ, ಬುರುಡೆ ಬುರುಡೆ’ ಎಂದು ಕೂಗುತ್ತಾ ಸಭಾತ್ಯಾಗ ಮಾಡಿದರು. ವಿಧಾನಸಭೆ ಪ್ರವೇಶದ್ವಾರದ ಬಾಗಿಲಿಗೆ ಬಿಜೆಪಿ ಶಾಸಕರು ಪೋಸ್ಟರ್ ಅಂಟಿಸಿದರು.

Leave a Comment

Your email address will not be published. Required fields are marked *