Ad Widget .

HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ

ಸಮಗ್ರ ನ್ಯೂಸ್: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನಿರ್ದಿಷ್ಟ ಸಮಯ ನೀಡಿತ್ತು ಆದರೆ ಇದೀಗ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೇ 31ರ ವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್​ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

Ad Widget . Ad Widget .

ಸದನದಲ್ಲಿ ಗಡುವು ವಿಸ್ತರಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾಹಿತಿ ನೀಡಿದ್ದರು. ಇಂದು ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ನೀಡಿದ್ದು, ಆ ಮೂಲಕ ನಾಲ್ಕನೇ ಬಾರಿಗೆ ಗಡುವು ವಿಸ್ತರಣೆ ಮಾಡಲಾಗಿದೆ. ಗಡುವು ವಿಸ್ತರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಾಹನ ಸವಾರರು ಮನವಿ‌ ಮಾಡಿದ್ದರು. ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್​​ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್‌ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. 2019ರ ಏಪ್ರಿಲ್‌ ಬಳಿಕ ಖರೀದಿ ಮಾಡಿರುವ ವಾಹನಗಳಿಗೆ ರಿಜಿಸ್ಟ್ರೇಷನ್‌ ವೇಳೆಯೇ HSRP ಪ್ಲೇಟ್ ಅಳವಡಿಸಲಾಗಿದೆ. ಹೀಗಾಗಿ 2019 ರ ಏಪ್ರಿಲ್‌ಗೂ ಮುನ್ನ ಖರೀದಿಸಿರುವ ಎಲ್ಲಾ ವಾಹನಗಳಿಗೂ ಅತೀ ಸುರಕ್ಷತಾ ನೋಂದಣಿ ಫಲಕ ಅಳವಡಿಕೆ ಕಡ್ಡಾಯವಾಗಿದೆ.

Ad Widget . Ad Widget .

ನಂಬರ್‌ ಪ್ಲೇಟ್‌ ಅಳವಡಿಕೆಗೆ ಇಂದು ಡೆಡ್‌ಲೈನ್‌ ನೀಡಲಾಗಿತ್ತು. ಆದರೆ ಜಿಲ್ಲೆ ಜಿಲ್ಲೆಗಳಲ್ಲೂ ಈ ಪ್ಲೇಟ್‌ ಅಳವಡಿಕೆ ಆಗಿಲ್ಲ. ಇನ್ನೂ ಒಂದೂವರೆ ಕೋಟಿಗೂ ಹೆಚ್ಚು ವಾಹನಗಳಿಗೆ ಈ ಪ್ಲೇಟ್‌ ಅಳವಡಿಕೆ ಆಗಬೇಕಿದೆ ಎಂದು ಕಾಂಗ್ರೆಸ್‌ನ ಪರಿಷತ್‌ ಸದಸ್ಯ ಮಧು ಮಾದೇಗೌಡ ಸದನದಲ್ಲಿ ಪ್ರಸ್ತಾಪಿಸಿದ್ದರು. ಮಧು ಮಾದೇಗೌಡ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಸದ್ಯ 18 ಲಕ್ಷ ವಾಹನಗಳಿಗೆ ಮಾತ್ರ ಈ ಪ್ಲೇಟ್ ಅಳವಡಿಕೆ ಆಗಿದೆ. ಇನ್ನೂ ಒಂದು ಕೋಟಿ 82 ಲಕ್ಷ ವಾಹನಗಳಿಗೆ ಈ ಪ್ಲೇಟ್ ಅಳವಡಿಸಬೇಕಿದೆ. ಹೀಗಾಗಿ 3 ತಿಂಗಳ ವರೆಗೆ ಗಡುವು ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದ್ದರು.

HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಸರ್ವರ್‌ ಪ್ರಾಬ್ಲಂ, ಎರರ್‌ ಸಂದೇಶದಿಂದಾಗಿ ಜನ ಪರದಾಡುತ್ತಿದ್ದರು. ಹೀಗಾಗಿ ಸರ್ಕಾರ 3 ತಿಂಗಳು ವಿಸ್ತರಣೆ ಮಾಡಿದು ಸವಾರರಿಗೆ ಸಂತಸವಾಗಿದೆ.

Leave a Comment

Your email address will not be published. Required fields are marked *