Ad Widget .

ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಅಭ್ಯರ್ಥಿ.?| ಈ ಬಗ್ಗೆ ಸಿಎಂ ಸಿದ್ ಹೇಳಿದ್ದೇನು?

ಸಮಗ್ರ ನ್ಯೂಸ್: ಸಿಎಂ ತವರು ಜಿಲ್ಲೆಯಾದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ‌ ಖ್ಯಾತ ಚಿತ್ರ ನಟ ಡಾಲಿ ಧನಂಜಯ (Daali Dhananjay) ಅವರನ್ನು ಕಣಕ್ಕಿಳಿಸಲು ತೆರೆಮರೆ ಹಿಂದೆ ಕಸರತ್ತು ನಡೆಯುತ್ತಿದೆ ಎಂದೇ ಹೇಳಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Ad Widget . Ad Widget .

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾಲಿ ಧನಂಜಯ್‌ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ಪರ್ಧೆ ವಿಚಾರ ಪ್ರಸ್ತಾಪವೇ ಆಗಿಲ್ಲ. ಚರ್ಚೆಯೂ ಆಗಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಆದರೆ, ಈಚೆಗಿನ ಬೆಳವಣಿಗೆಯನ್ನು ಗಮನಿಸಿದಾಗ ಅವರನ್ನು ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಣಕ್ಕಿಳಿಸುವ ಮೂಲಕ ಪ್ರಬಲ ಎದುರಾಳಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ರೂಪಿಸುತ್ತಿದೆ ಎನ್ನಲಾಗಿದೆ. ಈ ಹಿಂದೆ “ಬಡವರ ಮಕ್ಕಳು ಬೆಳೆಯಬೇಕು” ಎಂದು ಹೇಳಿದ್ದ ಧನಂಜಯ್‌ ಒಂದು ವೇಳೆ ಸ್ಪರ್ಧೆ ಮಾಡಿದರೆ ಪ್ರಬಲ ಎದುರಾಳಿಯಾಗಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.

Ad Widget . Ad Widget .

ಠಕ್ಕರ್‌ ಕೊಡುತ್ತಿರುವ ಪ್ರತಾಪ್‌ ಸಿಂಹ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ (MP Pratapsimha). ಅವರು ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೇರವಾದ ಠಕ್ಕರ್‌ ಕೊಡುತ್ತಿದ್ದಾರೆ. ಒಂದು ಹಂತದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು. ಆದರೆ, ಈಗ ಚರ್ಚೆಯ ದಿಕ್ಕು ಸ್ವಲ್ಪ ಬದಲಾಗಿ ಡಾಲಿ ಧನಂಜಯ ಅವರ ಹೆಸರು ಕೇಳಿಬರುತ್ತಿದೆ.

ಒಂದು ವೇಳೆ ಡಾಲಿ ಧನಂಜಯ ಅವರು ಮೈಸೂರು ಕ್ಷೇತ್ರದಲ್ಲಿ ಕಣಕ್ಕಿಳಿದರೆ ದೊಡ್ಡ ಮಟ್ಟದ ಸಂಚಲನವಂತೂ ಕ್ರಿಯೇಟ್ ಆಗಲಿದೆ. ಸಿದ್ದರಾಮಯ್ಯ ಜತೆ ಆಪ್ತ ಒಡನಾಟ ಹೊಂದಿರುವ ಡಾಲಿ ಅವರು ಜನಪ್ರಿಯ ನಟ ಆಗಿರುವ ಕಾರಣಕ್ಕೆ ಪ್ರಚಾರ ನಿರಾಯಾಸವಾಗಿ ನಡೆಯುತ್ತದೆ. ಮತ್ತು ಗೆಲ್ಲುವುದು ಕಷ್ಟವಲ್ಲ ಎಂಬ ಲೆಕ್ಕಾಚಾರ ಕಾಂಗ್ರೆಸ್‌ನದ್ದು.

ಬಜೆಟ್‌ ಭಾಷಣದಲ್ಲಿ ಡಾಲಿ ಸಂಭಾಷಣೆ ಉಲ್ಲೇಖಿಸಿದ್ದ ಸಿದ್ದರಾಮಯ್ಯ!
ರಾಜ್ಯ ಸರ್ಕಾರ ಈಗಾಗಲೇ ಡಾಲಿ ಧನಂಜಯ ಅವರನ್ನು ಲಿಡ್ಕರ್‌ ಕಂಪನಿಯ ರಾಯಭಾರಿಯಾಗಿ ಮಾಡಿದೆ. ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಡಾಲಿ ಧನಂಜಯ ಅವರ ಸಿನಿಮಾದ ಸಂಭಾಷಣೆಯನ್ನು ಉಲ್ಲೇಖಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಅನುದಾನಗಳನ್ನ ಮಂಡಿಸುವ ಮುನ್ನ ಸಿಎಂ ಸಿದ್ದರಾಮಯ್ಯನವರು ʻಡೇರ್ ಡೆವಿಲ್ ಮುಸ್ತಫಾʼ ಚಿತ್ರದ ಎರಡು ಸಾಲುಗಳನ್ನು ಸದನದಲ್ಲಿ ಹೇಳಿದ್ದಾರೆ. “ಒಂದು ತೋಟದಲ್ಲಿ ನೂರು ಹೂವು ಅರಳಲಿ, ಎಲ್ಲಾ ಕೂಡಿ ಆಡುವಂತಹ ಗಾಳಿ ಬೀಸಲಿ” ಎಂಬ ಸಾಲುಗಳನ್ನ ಹೇಳುವ ಮೂಲಕ ಸಮಾಜ ಕಲ್ಯಾಣ ಇಲಾಖೆಗೆ ಕೊಟ್ಟಿರುವ ಅನುದಾನವನ್ನು ಮಂಡಿಸಿದ್ದರು.

Leave a Comment

Your email address will not be published. Required fields are marked *