ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ರಿಸ್ಕ್ ಆಫೀಸರ್, ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 19, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಹುದ್ದೆಯ ಮಾಹಿತಿ:
ರಿಸ್ಕ್ ಆಫೀಸರ್ -1
ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ -1
ವಿದ್ಯಾರ್ಹತೆ:
ರಿಸ್ಕ್ ಆಫೀಸರ್ – ಪದವಿ, ಸಿಎ, ಸಿಎಂಎ, ಸಿಎಫ್ಎ
ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ – ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ
ವಯೋಮಿತಿ:
ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
apply here
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.