Ad Widget .

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ!

ಸಮಗ್ರ ನ್ಯೂಸ್: ನಟಿ ಸನ್ನಿಲಿಯೋನ್‌ ಅವರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ ಅದೇ ರೀತಿ ಈ ಬಾರಿ ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ (Sunny Leone) ಫೋಟೋ ಕಂಡುಬಂದಿದೆ.

Ad Widget . Ad Widget .

ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ (UP Police Recruitment Exam) ಪ್ರವೇಶ ಪತ್ರದಲ್ಲಿ ನಟಿ ಫೋಟೋ ಕಾಣಿಸಿಕೊಂಡಿದೆ. ಸದ್ಯ ಈ ಪ್ರವೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Ad Widget . Ad Widget .

ಫೇ. 17 ರಂದು ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿ (UPPRPB)ಯು ರಾಜ್ಯದ 2,385 ಪರೀಕ್ಷಾ ಕೇಂದ್ರಗಳೊಂದಿಗೆ 75 ಜಿಲ್ಲೆಗಳಲ್ಲಿ ಪರೀಕ್ಷೆಗಳನ್ನು ನಡೆಸಿತು. ಇದರಲ್ಲಿ ಕನೌಜ್‌ನ ತಿರ್ವಾ ತಹಸಿಲ್‌ನಲ್ಲಿರುವ ಶ್ರೀಮತಿ ಸೋನೆಶ್ರೀ ಸ್ಮಾರಕ ಬಾಲಕಿಯರ ಕಾಲೇಜು ಕೂಡ ಒಂದು ಪರೀಕ್ಷಾ ಕೇಂದ್ರವಾಗಿತ್ತು. ಇಲ್ಲಿ ಸನ್ನಿಲಿಯೋನ್ ಅವರ ಫೋಟೋದೊಂದಿಗೆ ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿಯ (UPPRB) ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಲಾಗಿದೆ.

Leave a Comment

Your email address will not be published. Required fields are marked *