ಸಮಗ್ರ ನ್ಯೂಸ್: ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿಸ್ತರಿಸಲು ವಿಕೇಂದ್ರೀಕರಣದ ಧ್ಯೇಯದೊಂದಿಗೆ ಹಾಗು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಮೂಡಿಸಲು ಹೋಬಳಿ ಘಟಕ ಸ್ಥಾಪಿಸುವ ಜೊತೆಗೆ ಗ್ರಾಮ ಮಟ್ಟದಲ್ಲೂ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಾದ ಡಾ. ಶ್ರೀನಾಥ್ ಎಂ.ಪಿ. ಸುಳ್ಯ ಹಾಗು ಪಂಜ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭದಲ್ಲಿ ಮಾತಾನಾಡಿದರು.
ಮುಖ್ಯ ಅಥಿತಿಗಳಾಗಿ ಆಗಮಿಸಿದ ಕುತ್ಯಾಳ ನಾಗಪ್ಪ ಗೌಡ ಮಾತನಾಡಿ ಸಾಹಿತ್ಯ ಸಮ್ಮೆಲನಗಳ ಜೊತೆಗೆ ಸಾಹಿತ್ಯದ ವಿಮರ್ಷೆಗಳು ಕೂಡ ನಡೆಯಬೆಕೆಂದು ಕರೆ ಇತ್ತರು. ಜಿಲ್ಲಾಧ್ಯಕ್ಷ ಶ್ರೀನಾಥ್ ಉಜಿರೆ ಇವರು ಕನ್ನಡ ದ್ವಜವನ್ನು ಹಸ್ತಾಂತರಿಸುವ ಮೂಲಕ ಪದ ಸ್ವೀಕಾರ ಕಾರ್ಯಕ್ರಮವನ್ನು ನೇರವೇರಿಸಿದರು ಮತ್ತು ಪದಾಧಿಕಾರಿಗಳಿಗೆ ಶಾಲು ನೀಡಿ ಸ್ವಾಗತಿಸಿದರು. ಸಭೆಯಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತಿ ನಾಗಪ್ಪ ಗೌಡ (ಕಿರಣ) ಇವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಸುಳ್ಯ ಹೊಬಳಿ ಘಟಕ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಘಟಕ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ಉಪಸ್ತಿತರಿದ್ದರು. ಸುಳ್ಯ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪೆರಾಲು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಗೌರವ ಕಾರ್ಯದರ್ಶಿ ಚಂದ್ರಮತಿ ವಂದಿಸಿ, ಲತಾಶ್ರೀ ಸುಪ್ರೀತ್ ಕಾರ್ಯಕ್ರಮ ನಿರೂಪಿಸಿದರು.