ರಾಮನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ‌ ಬಾಯ್ಲರ್ ಸ್ಫೋಟ| ಓರ್ವ ಸಾವು

ಸಮಗ್ರ ನ್ಯೂಸ್: ರಾಮನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ‌ ಬಾಯ್ಲರ್ ಸ್ಫೋಟಗೊಂಡು ಓರ್ವ ಕಾರ್ಮಿಕ‌ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

Ad Widget ... ..

ರಾಮನಗರದ ಟಿಪ್ಪುಬಡಾವಣೆಯ ಕಾರ್ಖಾನೆಯಲ್ಲಿ‌ ಈ ಘಟನೆ ಸಂಭವಿಸಿದೆ. ಸನಾವುಲ್ಲಾ ಖಾನ್(63)‌ ಮೃತ ವ್ಯಕ್ತಿ. ಬಾಯ್ಲರ್‌ಗೆ ಸೌದೆ ಹಾಕುವಾಗ ಏಕಾಏಕಿ ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಖಾನೆಯಲ್ಲಿ‌ 10ಕ್ಕೂ‌ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್‌ ಉಳಿದ ಕಾರ್ಮಿಕರು ದೂರವಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಕಾರ್ಖಾನೆ ಅಕ್ರಂ ಪಾಷಾ ಎಂಬುವವರಿಗೆ ಸೇರಿದ್ದು, ಅವರ ವಿರುದ್ಧ ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *