ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ರಿಸ್ಕ್ ಆಫೀಸರ್, ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಯ ಮಾಹಿತಿ:
ರಿಸ್ಕ್ ಆಫೀಸರ್ -1
ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ -1
ವಿದ್ಯಾರ್ಹತೆ:
ರಿಸ್ಕ್ ಆಫೀಸರ್ – ಪದವಿ, ಸಿಎ, ಸಿಎಂಎ, ಸಿಎಫ್ಎ
ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ – ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ
ವಯೋಮಿತಿ:
ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://nabfins.org/Careers/form.php?id=565 online apply
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.