Ad Widget .

ಅನಾರೋಗ್ಯ ಹಿನ್ನೆಲೆ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದ ಸಿಎಂ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಗಾಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಬಜೆಟ್ ಮಂಡನೆ ಬಳಿಕ ಎರಡು ದಿನ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿತ್ತು ಎನ್ನಲಾಗಿದೆ. ಹೀಗಾಗಿ ವಿಶ್ರಾಂತಿ ಪಡೆಯಲು ಸದ್ಯ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.

Ad Widget . Ad Widget .

ಫೆ.16 ರಂದು ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದರು ಇದಾದ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. 3 ಗಂಟೆ 15 ನಿಮಿಷ ಸುದೀರ್ಘ ಬಜೆಟ್ ಭಾಷಣ ಮಾಡಿದರು. ಜೊತೆಗೆ ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಬಳಿಕ ಫೆ.18ರ ಭಾನುವಾರ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿದ್ದರು. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ್ದರು ಈ 2 ದಿನ ನಿರಂತರ ಜಿಲ್ಲಾ ಪ್ರವಾಸಗಳಲ್ಲಿ ಭಾಷಣ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯನವರಿಗೆ ಗಂಟಲು ನೋವಿನ ಸಮಸ್ಯೆ ಎದುರಾಗಿದೆ. ಹೀಗಾಗಿ ವಿಶ್ರಾಂತಿಯ ಅವಶ್ಯಕತೆ ಇದ್ದು ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *