ಸಮಗ್ರ ಉದ್ಯೋಗ: ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ & ಓಷನ್ ರಿಸರ್ಚ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಹುದ್ದೆಯ ಮಾಹಿತಿ:
ಪ್ರಾಜೆಕ್ಟ್ ಸೈಂಟಿಸ್ಟ್ -I- 18
ಪ್ರಾಜೆಕ್ಟ್ ಸೈಂಟಿಸ್ಟ್-II – 7
ವಿದ್ಯಾರ್ಹತೆ:
ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ & ಓಷನ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಪ್ರಾಜೆಕ್ಟ್ ಸೈಂಟಿಸ್ಟ್ -I- 35 ವರ್ಷ
ಪ್ರಾಜೆಕ್ಟ್ ಸೈಂಟಿಸ್ಟ್-II – 40 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ವೇತನ:
ಪ್ರಾಜೆಕ್ಟ್ ಸೈಂಟಿಸ್ಟ್ -I- ಮಾಸಿಕ ₹ 56,000
ಪ್ರಾಜೆಕ್ಟ್ ಸೈಂಟಿಸ್ಟ್-II – ಮಾಸಿಕ ₹ 67,000
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://onlineform.ncpor.res.in/ncpor202401/login.phpApply here
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.