ಸಮಗ್ರ ಸಮಾಚಾರ: ಕುವೆಂಪು ಅವರ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಬರಹವನ್ನು ತೆಗೆದು ಹಾಕಿ ಜ್ಞಾನದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎನ್ನುವ ಬದಲಾವಣೆಯನ್ನು ವಿಜಯಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಮಾಡಲಾಗಿತ್ತು. ಇದರಿಂದಾಗಿ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆದಿದ್ದು, ಇದೀಗ ಸಮಾಜ ಕಲ್ಯಾಣ ಇಲಾಖೆಯು ಕುವೆಂಪು ಘೋಷವಾಕ್ಯ ಬದಲಾಯಿಸಲು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರ ಆದೇಶದ ಮೇಲೆ ಈ ರೀತಿ ಬದಲಾವಣೆ ಮಾಡಿದ್ದೇವೆ. ಆದರೆ ಅವರು ಟೆಲಿಗ್ರಾಂನಲ್ಲಿ ಸೂಚನೆ ನೀಡಿದ್ದರು. ಈ ಬಗ್ಗೆ ಸರ್ಕಾದ ಸುತ್ತೋಲೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ ಹೇಳಿದ್ದರು. ಇದೀಗ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂದು ವಾಪಾಸ್ ಬರೆಸಲು ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಸೂಚನೆ ನೀಡಿದ್ದಾರೆ.
ಈ ಶಾಲೆಗಳಲ್ಲಿ ಓದುವ ಮಕ್ಕಳ ಪೆÇೀಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎನ್ನುವ ಉದ್ದೇಶದಿಂದ ಈ ರೀತಿ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ. ವಸತಿ ಶಾಲೆಗಳಿಗೆ ಮಕ್ಕಳನ್ನು ಕಳಿಸಿದ ಪೆÇೀಷಕರಿಗೆ ನೂರಾ ಎಂಟು ಆತಂಕಗಳು ಇರುತ್ತವೆ. ಹಾಗಾಗಿ ಇವುಗಳ ಬಗ್ಗೆ ಪ್ರಶ್ನೆ ಮಾಡಿ ತಿಳಿದುಕೊಳ್ಳಲಿ ಎನ್ನುವುದು ಬರವಣಿಗೆ ಆಶಯವಾಗಿದೆ ಎನ್ನಲಾಗಿದೆ.