Ad Widget .

ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು ಸರಕಾರಕ್ಕೆ ಹಿಂತಿರುಗಿಸಲು ಸೂಚನೆ/ ಸರಕಾರದ ಅಧಿಸೂಚನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ

ಸಮಗ್ರ ನ್ಯೂಸ್: ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು ಮೂರು ತಿಂಗಳ ಒಳಗೆ ಹಿಂತಿರುಗಿಸಲು ಸರಕಾರ ಹೊರಡಿಸಿರುವ ಅಧಿಸೂಚನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ವನ್ಯಜೀವಿಗಳ ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಒಪ್ಪಿಸಲು ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು.

Ad Widget . Ad Widget .

ಕೊಡಗಿನವರಾದ ರಂಜಿ ಪೂಣಚ್ಚ ಮತ್ತು ಕುಟ್ಟಪ್ಪ ಈ ಅಧಿಸೂಚನೆಯ ಅಧಿನಿಯಮಗಳ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ದಾಖಲಿಸಿದ್ದರು. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಉಚ್ಛ ನ್ಯಾಯಾಲಯವು ಸರಕಾರ ಹೊರಡಿಸಿರುವ ಅಧಿಸೂಚನೆಯ ಅಧಿನಿಯಮಗಳಿಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *