Ad Widget .

ಆನೆದಾಳಿಯಿಂದ ಕೇರಳದಲ್ಲಿ ಕೊಲ್ಲಲ್ಪಟ್ಟ ವ್ಯಕ್ತಿಗೆ ಕರ್ನಾಟಕದಿಂದ ಪರಿಹಾರ| ಬಿಜೆಪಿಯಿಂದ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ ₹15 ಲಕ್ಷವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

Ad Widget . Ad Widget .

‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್‌ ದುರುಪಯೋಗಪಡಿಸಿಕೊಳ್ಳುತ್ತಿದೆ.

Ad Widget . Ad Widget .

ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್‌ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ.

‘ಬರಗಾಲದಿಂದ ರಾಜ್ಯದಾದ್ಯಂತ ನೂರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ತುರ್ತು ಅಗತ್ಯಗಳ ಬಗ್ಗೆ ಗಮನಹರಿಸುವ ಬದಲು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ’ ಎಂದರು.

Leave a Comment

Your email address will not be published. Required fields are marked *