Ad Widget .

ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ವಿದ್ಯಾರ್ಥಿಗೆ ಥಳಿತ

ಸಮಗ್ರ ನ್ಯೂಸ್: ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ ಘಟನೆ ಚಿಕ್ಕಬಳ್ಳಾಪುರದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ.

Ad Widget . Ad Widget .

ಚಿಕ್ಕಬಳ್ಳಾಪುರದ ವಾಪಸಂದ್ರದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಪಿಯು ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಚುಡಾಯಿಸಿದ್ದಾನೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಆತನನ್ನು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿರುವ ಗೋಡೌನ್​ನಲ್ಲಿ ಹಾಕಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಮಹಂತೇಶ್ ಕೂಡ ವಿದ್ಯಾರ್ಥಿಗೆ ಥಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *