ಸಮಗ್ರ ಉದ್ಯೋಗ: Institute for Stem Cell Biology and Regenerative Medicine ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಹತೆ:
ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 20, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹ 40,000-52,500
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://www.instem.res.in/jobportal/node/add/application/51112 apply here
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.