Ad Widget .

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​

ಸಮಗ್ರ ನ್ಯೂಸ್: ರಾಮನಗರದ 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ಅಹೋ ರಾತ್ರಿ ಪ್ರತಿಭಟನೆ ನಡೆಸಿ ಇಂದಿಗೆ ಮೂರನೇ ದಿನಕ್ಕೂ ಕಾಲಿಡುತ್ತಿದೆ.ಈ ಪ್ರಕರಣ ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಮತ್ತೊಂದೆಡೆ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಲಾಗಿದೆ.

Ad Widget . Ad Widget .

40 ವಕೀಲರ ವಿರುದ್ಧ ಐಜೂರು ಪೊಲೀಸ್ ಠಾಣೆ ಪಿಎಸ್​ಐ ಆಗಿದ್ದ ತನ್ವೀರ್ ಹುಸೇನ್​ ಅವರು ಎಫ್​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರ ಪ್ರತಿಭಟನೆ ಆರಂಭಿಸಿದರು. ವಕೀಲರಿಗೆ ಪ್ರತಿಪಕ್ಷ ನಾಯಕ ಆರ್ ಅಶೋಕ, ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರು ಕೂಡ ಸಾಥ್ ನೀಡಿದ್ದರು. ತಡ ರಾತ್ರಿ ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಧರಣಿ ನಡೆಸುತ್ತಿದ್ದ ವಕೀಲರಿಗೆ ಕೈ ಜೋಡಿಸಿದ್ದರು.

Ad Widget . Ad Widget .

ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ವಕೀಲರು ತಡರಾತ್ರಿ ವರೆಗೂ ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಈಗ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಲಾಗಿದೆ.

Leave a Comment

Your email address will not be published. Required fields are marked *