ಸಮಗ್ರ ನ್ಯೂಸ್: ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ.
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.
ಮುಂದುವರೆದು ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ “(ಇ) ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಆದೇಶಿಸಿದೆ.
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಈ ಮೊದಲು ಆದೇಶ ಹೊರಡಿಸಿತ್ತು, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದರು. ಇದು ಪ್ರಿಂಟ್ ಮಿಸ್ಟೇಕ್ ಆಗಿದೆ. ಇದನ್ನು ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಎಂದು ಬದಲಾವಣೆ ಮಾಡಿ ಸರ್ಕಾರ ಮರು ಆದೇಶ ಹೊರಡಿಸಲಿದೆ. ಸಣ್ಣ ತಪ್ಪಿನಿಂದ ಗೊಂದಲ ಆಗಿದೆ.ಎಲ್ಲವನ್ನು ಸರಿ ಮಾಡಿ ಆದೇಶ ಹೊರಡಿಸುತ್ತೇವೆ ಎಂದಿದ್ದರು.