Ad Widget .

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!?

ಸಮಗ್ರ ನ್ಯೂಸ್: ಪುತ್ತೂರು ನಗರದ ಹೊರ ವಲಯದ ಮುಕ್ರಂಪಾಡಿ ಜಂಕ್ಷನ್‌ನಲ್ಲಿ ಫೆ. 19ರಂದು ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳು, ಕಲ್ಲೇಗ ಅಕ್ಷಯ್‌ ಕೊಲೆ ಪ್ರಕರಣದ ಆರೋಪಿಯೋರ್ವನ ಸಹೋದರನನ್ನು ಕೊಲ್ಲಲು ಸಂಚು ರೂಪಿಸಿದ ಅಂಶ ಬೆಳಕಿಗೆ ಬಂದಿದೆ.

Ad Widget . Ad Widget .

ಕಿಶೋರ್‌ ಪೂಜಾರಿ ಕಲ್ಲಡ್ಕ, ಮನೋಜ್‌, ಆಶಿಕ್‌ ಮತ್ತು ಸನತ್‌ ಕುಮಾರ್‌ ಬಂಧಿತರು. ಈ ಪೈಕಿ ಕಿಶೋರ್‌ ಪೂಜಾರಿಯು ಕೊಲೆ ಪ್ರಕರಣವೊಂದರಲ್ಲಿ ಜೈಲಿನಲಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿ ನಲ್ಲಿ ಬಿಡುಗಡೆ ಗೊಂಡಿದ್ದ. ಆರೋಪಿ ಗಳು ಕೊಲೆ ಮಾಡುವ ಉದ್ದೇಶ  ದಿಂದ ಕಾರಿನಲ್ಲಿ ತಲವಾರು ಇರಿಸಿ ಕೊಂಡಿದ್ದರು ಎಂಬ ಅಂಶ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Ad Widget . Ad Widget .

ಕಬಕ ಗ್ರಾಮದ ಕಲ್ಲೇಗ ನಿವಾಸಿ, ಕಲ್ಲೇಗ ಟೈಗರ್ಸ್‌ ಎಂಬ ಹುಲಿ ವೇಷ ಕುಣಿತ ತಂಡದ ನಾಯಕ ಅಕ್ಷಯ್‌ ಕಲ್ಲೇಗ (26)ನನ್ನು 2023ರ ನ.6ರಂದು ತಡರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ದಾರಂದಕುಕ್ಕು ನಿವಾಸಿಯೋರ್ವನ ಸಹೋದರನ ಕೊಲೆಗೆ ಕಿಶೋರ್‌ ಪೂಜಾರಿ ಗ್ಯಾಂಗ್‌ ಸಂಚು ರೂಪಿಸಿತ್ತು ಎನ್ನಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *