ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ?

ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ECI) ಮಾ. 9ರ ನಂತರ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆ.

Ad Widget ... ..

ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯಗಳಿಗೆ ತೆರಳಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ. ಈ ಹಿಂದಿನ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು 2019ರ ಮಾರ್ಚ್‌ 10ರಂದು ಆಯೋಗ ಘೋಷಿಸಿತ್ತು. ಏ. 11ರಿಂದ ಮೇ. 19ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು ಎಂದು ವರದಿ ವಿವರಿಸಿದೆ.
ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ನಡುವೆಯೇ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ಈ ನಿಟ್ಟಿನಲ್ಲಿ ಇತ್ತೀಚೆಗೆ ಚುನಾವಣಾ ಆಯೋಗದ ಅಧಿಕಾರಿಗಳು ನಿರಂತರವಾಗಿ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ಅಷ್ಟೇ ಅಲ್ಲ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯ ಕುರಿತು ಪರಿಶೀಲಿಸಲು ಮಾರ್ಚ್‌ 8-9ರಂದು ಚುನಾವಣಾ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Ad Widget

ಮತ್ತೊಂದು ವರದಿಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 3ರಂದು ಮಂತ್ರಿ ಪರಿಷತ್‌ ಸಭೆ ನಡೆಸಲಿದ್ದು, ಬಳಿಕ ಕೇಂದ್ರ ಚುನಾವಣಾ ಆಯೋಗ ಮಾರ್ಚ್‌ 5ರ ನಂತರ ಲೋಕಸಭಾ ಚುನಾವಣೆಯ ದಿನಾಂಕ ಘೋಷಿಸುವ ಸಾಧ್ಯತೆ ಇದ್ದಿರುವುದಾಗಿ ಹೇಳಿದೆ.

Leave a Comment

Your email address will not be published. Required fields are marked *