ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಮುಂದಿನ ತಿಂಗಳು ಅಂದರೆ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯ ತಮಿಳುನಾಡಿನ ಎಂ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯಲಿದೆ.

ಇನ್ನೂ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 2 ಹಂತಗಳಲ್ಲಿ ವೇಳಾಪಟ್ಟಿ ಬಿಡುಗಡೆಯಾಗಲಿದ್ದು, ಮೊದಲ ಹಂತವನ್ನು ಈಗ ಪ್ರಕಟಿಸಲಾಗಿದೆ. ಅದರಂತೆ ಮಾರ್ಚ್ 22 ರಿಂದ ಏಪ್ರಿಲ್ 7 ರ ವರೆಗೆ ನಡೆಯಲ್ಲಿದೆ. ಐಪಿಎಲ್ನ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾದ ನಂತರವಷ್ಟೇ ನಿರ್ಧಾರವಾಗಲಿದೆ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಈ ಹಿಂದೆಯೇ ತಿಳಿಸಿದ್ದರು.