ಮಹಾರಾಷ್ಟ್ರದಲ್ಲಿ ಪ್ರಸಾದ ಸೇವಿಸಿ 300 ಕ್ಕೂ ಹೆಚ್ಚು ಜನರು ಅಸ್ವಸ್ಥ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಪ್ರಸಾದ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 300 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

Ad Widget ... ..

ಲೋನಾರ್‌ನ ಸೋಮಥಾನ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮವಾದ ಹರಿಣಂ ಸಪ್ತಾಹದ ಕೊನೆಯ ದಿನದಂದು ರಾತ್ರಿ ಈ ಘಟನೆ ನಡೆದಿದೆ ಎಂದು ಬುಲ್ಧಾನ ಜಿಲ್ಲಾಧಿಕಾರಿ ಕಿರಣ್ ಪಾಟೀಲ್ ತಿಳಿಸಿದರು.

Ad Widget

ಹಾಸಿಗೆಗಳ ಕೊರತೆಯಿಂದಾಗಿ ಆಸ್ಪತ್ರೆಯ ಹೊರಗೆ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು, ಸಲೈನ್ ಬಾಟಲಿಗಳನ್ನು ಮರಗಳಿಗೆ ಕೊಕ್ಕೆಯಿಂದ ನೇತುಹಾಕಲಾಗಿದೆ. ಸೋಮಠಾಣಾ ಮತ್ತು ಖಾಪರಖೇಡ್ ಗ್ರಾಮಗಳ ಭಕ್ತರು ರಾತ್ರಿ 10 ಗಂಟೆಗೆ ದೇವಸ್ಥಾನಕ್ಕೆ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಪ್ರಸಾದವನ್ನು ಸೇವಿಸಿದ ನಂತರ , ಅವರು ಹೊಟ್ಟೆ ನೋವು, ವಾಕರಿಕೆ ಮತ್ತು ವಾಂತಿಯಿಂದ ಬಳಲಿದ್ದಾರೆ. ಅಸ್ವಸ್ಥರಾದ ಜನರನ್ನು ಗ್ರಾಮದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಬೆಡ್‌ಗಳ ಕೊರತೆಯಿಂದಾಗಿ ಕೆಲ ರೋಗಿಗಳು ಆಸ್ಪತ್ರೆಯ ಹೊರಭಾಗದಲ್ಲಿ ಚಿಕಿತ್ಸೆ ಪಡೆದುಕೊಂಡರು.

Leave a Comment

Your email address will not be published. Required fields are marked *